Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page #ಪೀಪಲ್ಸ್ ಪದ್ಮ ! ನಿಮ್ಮೊಳಗಿರುವ ಅಸಾಧಾರಣ ಸಾಧಕರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಿ ಎಂದ ಮೋದಿ

#ಪೀಪಲ್ಸ್ ಪದ್ಮ ! ನಿಮ್ಮೊಳಗಿರುವ ಅಸಾಧಾರಣ ಸಾಧಕರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಿ ಎಂದ ಮೋದಿ

ಬೆಂಗಳೂರು, ಜುಲೈ 11, 2021 (www.justkannada.in): ‘ಪೀಪಲ್ಸ್‌ ಪದ್ಮ’ ಹ್ಯಾಶ್‌ಟ್ಯಾಗ್‌ನೊಂದಿಗೆ ಇಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಜತೆಗೆ ಪದ್ಮ ಪ್ರಶಸ್ತಿಗಳಿಗೆ ಸಾಧಕರನ್ನು ನಾಮನಿರ್ದೇಶನ ಮಾಡಲು ಪ್ರಧಾನಿ ಮೋದಿ ವಿನಂತಿಸಿದ್ದಾರೆ.

ಭಾರತ ಅನೇಕ ಪ್ರತಿಭಾವಂತರನ್ನು ಒಳಗೊಂಡಿದೆ. ಅವರು ತಳಮಟ್ಟದಲ್ಲಿ ಅಸಾಧಾರಣ ಕೆಲಸ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಾವು ಹೆಚ್ಚಾಗಿ ಕೇಳಿರುವುದಿಲ್ಲ. ಅಂತಹವರನ್ನು ಗುರುತಿಸಿ ಪದ್ಮ ಪ್ರಶಸ್ತಿ ನಾಮ ನಿರ್ದೇಶನ ಮಾಡಿ ಎಂದು ಕೋರಿದ್ದಾರೆ.

ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ ಎಂದು ಮೋದಿ ಮಾಹಿತಿ ನೀಡಿದ್ದಾರೆ.