ನಾಳೆ ಶಿಗ್ಗಾಂವಿ ಅಭ್ಯರ್ಥಿಯಾಗಿ ನಾಮಪತ್ರ : ಇಂದು ಕ್ಷೇತ್ರದ ಜನಪ್ರತಿನಿಧಿಗಳ ಸಭೆ ಕರೆದ ಸಿಎಂ ಬೊಮ್ಮಾಯಿ.

ಹಾವೇರಿ,ಏಪ್ರಿಲ್,14,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮೊದಲ ದಿನ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ನಾಳೆ ಇಡೀ ದಿನ  ಕ್ಷೇತ್ರದಲ್ಲೇ ಇದ್ದು ಗೆಲ್ಲುವ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ.m bo

ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಲ್ಲಿನ ತಮ್ಮ ಪಕ್ಷದ  ಎಲ್ಲಾ ಜನಪ್ರತಿನಿಧಿಗಳ ಸಭೆ ಕರ ಕರೆದಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು  ಮಾಡಬೇಕಾದ ತಂತ್ರಗಳ ಕುರಿತು ಚರ್ಚಿಸಲಿದ್ದಾರೆ.

Key words: Nomination – Shiggaavi –tomorrow- CM Bommai