ಉ-ಕರ್ನಾಟಕ ಭಾಗದಲ್ಲಿ ಜೆಡಿಎಸ್ ಶಕ್ತಿ ಏನು ಎಂಬುವವರಿಗೆ ಉತ್ತರ ಸಿಕ್ಕಿದೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.

ಮೈಸೂರು,ಸೆಪ್ಟಂಬರ್,9,2021(www.justkannada.in):  ಕಲ್ಬರ್ಗಿ ಮಹಾನಗರ ಪಾಲಿಕೆಯಲ್ಲಿ 7 ರಲ್ಲಿ 4 ಸ್ಥಾನ ಗೆದ್ದಿದ್ದೇವೆ. ಎರಡು ಸ್ಥಾನ ಮಾರ್ಜಿನ್ ನಲ್ಲಿ ಸೋತಿದ್ದೇವೆ. ಇದು ಹೆಚ್.ಡಿ ಕುಮಾರಸ್ವಾಮಿ ಅವರ ಶ್ರಮದ ಫಲ. ಉ-ಕರ್ನಾಟಕ ಭಾಗದಲ್ಲಿ ಜೆಡಿಎಸ್ ಶಕ್ತಿ ಏನು ಎಂಬುವವರಿಗೆ ಉತ್ತರ ಸಿಕ್ಕಿದೆ ಎಂದು ಮಾಜಿಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ದೇವೇಗೌಡರು, ಕಲ್ಬುರ್ಗಿ ಪಾಲಿಕೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಮಾತನಾಡಿದ್ದೇನೆ. ಅವರ ಪಕ್ಷದ ನಾಯಕರ ಜತೆ ಚರ್ಚಿಸುವಂತೆ ತಿಳಿಸಿದ್ದೇನೆ ಎಂದರು.

ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲಿ. ಸರ್ಕಾರದ ನಿರ್ಧಾರಕ್ಕೆ ನಮ್ಮ ಪಕ್ಷ ಬೆಂಬಲವನ್ನು ನೀಡುತ್ತದೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

key words: north-Karnataka -JDS –power- answer-Former Prime Minister -HD Deve Gowda.