ಜಾತಿ ಕಾರಣದಿಂದ ಚನ್ನಕೇಶವ ದೇವಸ್ಥಾನದ ಗರ್ಭಗುಡಿ ಪ್ರವೇಶಕ್ಕೆ ಬಿಡಲಿಲ್ಲ: ಬೇಸರ ಹೊರ ಹಾಕಿದ ಈಶ್ವರಾನಂದಪುರಿ ಸ್ವಾಮೀಜಿ.

ಚಿತ್ರದುರ್ಗ,ಫೆಬ್ರವರಿ,3,2024(www.justkannada.in):  ಜಾತಿ ಕಾರಣದಿಂದ ನಮಗೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿ ಪ್ರವೇಶಕ್ಕೆ  ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿಮಾತನಾಡಿದ ಈಶ್ವರಾನಂದಪುರಿ ಸ್ವಾಮೀಜಿ, ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ. ನಾವು ಕುರುಬ ಸ್ವಾಮೀಜಿ ದೇವಸ್ಥಾನಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ ಗಂಭೀರ ಆರೋಪ ಮಾಡಿದ್ದಾರೆ.

ವೈಕುಂಠ ಏಕಾದಶಿಗೆ ದೇಗುಲಕ್ಕೆ ಹೋಗಿದ್ದಾಗ ನರಕ ತೋರಿಸಿಬಿಟ್ಟರು. ಪೂಜಾರಿ ಹೆಣ್ಣುಮಕ್ಕಳಿಗೆಲ್ಲಾ ಗರ್ಭಗುಡಿ ಪ್ರವೇಶಿಸಲು ಬಿಟ್ಟಿದ್ದರು. ಮಠಾಧೀಶರಾದ ನಮಗೇ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಡಲಿಲ್ಲ. ಕುರುಬ ಸಮುದಾಯದ ಸ್ವಾಮೀಜಿ ಒಳಗೆ ಬಂದರೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ. ನಾವು ಹೋಗಿದ್ದಕ್ಕಾಗಿ ದೇಗುಲ ಸ್ವಚ್ಛವಾಯಿತು.  ಇನ್ಮುಂದೆ ಎಂದಿಗೂ ಚನ್ನಕೇಶವ ದೇವಸ್ಥಾನಕ್ಕೆ ನಾವು ಹೋಗುವುದಿಲ್ಲ ಎಂದು ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದರು.

Key words: Not allowed- enter -Channakesava temple – caste- Iswaranandapuri Swamiji