ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು,ಆಗಸ್ಟ್,16,2023(www.justkannada.in): ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆಹಾರ ಖಾತೆ ಸಚಿವ ಕೆ.ಹೆಚ್​.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ಹೆಚ್​.ಮುನಿಯಪ್ಪ, ಸಚಿವ ಸ್ಥಾನ ಬಿಟ್ಟುಕೊಟ್ಟರೂ ಕೂಡ ನಾನು ಶಾಸಕನಾಗಿಯೇ ಇರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಹೈಕಮಾಂಡ್​​ ತೀರ್ಮಾನ ಮಾಡಿದರೆ ನೋಡೋಣ. ಯುವಕರಿಗೆ ಅವಕಾಶ ಸಿಗಲಿ ಎಂಬುದು ವೈಯಕ್ತಿಕ ಅಭಿಪ್ರಾಯ  ಎಂದರು.

ಆಹಾರ ಇಲಾಖೆಗೆ ಅನುದಾನದ ಕೊರತೆ ಇಲ್ಲ

ಇನ್ನು ಆಹಾರ ಇಲಾಖೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಬಜೆಟ್​ ನಲ್ಲಿ ಇಲಾಖೆಗೆ 10 ಸಾವಿರ ಕೋಟಿ‌ ಹಣ ಕೊಟ್ಟಿದ್ದಾರೆ. ಅಕ್ಕಿ‌ ನೀಡುವ ಭರವಸೆ ಕೊಟ್ಟು ನಾವು ಅಧಿಕಾರಕ್ಕೆ ಬಂದಿದ್ದೇವೆ. ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ಅನುಭವ ಇದೆ  ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words: not contest – Lok Sabha- elections-Food Minister- KH Muniappa.