Saturday, August 1, 2026

BDA Apartments

Home Front Page ಕೇಂದ್ರದಿಂದ ಇನ್ನೂ ನಯಾಪೈಸೆ ನೆರವೂ ಸಿಕ್ಕಿಲ್ಲ: ಸಿಎಂ‌ ಸಿದ್ದರಾಮಯ್ಯ ಆಕ್ರೋಶ

ಕೇಂದ್ರದಿಂದ ಇನ್ನೂ ನಯಾಪೈಸೆ ನೆರವೂ ಸಿಕ್ಕಿಲ್ಲ: ಸಿಎಂ‌ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು, ನವೆಂಬರ್ 21, 2023 (www.justkannada.in):  ಕೇಂದ್ರ ಸರಕಾರ ಇಂದಿನವರೆಗೆ ಒಂದು ಪೈಸೆ‌ ನೆರವನ್ನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.