Sunday, September 20, 2026

BDA Apartments

ಎಐಸಿಸಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ- ಶಾಸಕ ಜಮೀರ್ ಅಹ್ಮದ್ ಖಾನ್ BDA JK_Adv ...
Home Front Page ಎಐಸಿಸಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ- ಶಾಸಕ ಜಮೀರ್ ಅಹ್ಮದ್ ಖಾನ್.

ಎಐಸಿಸಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ- ಶಾಸಕ ಜಮೀರ್ ಅಹ್ಮದ್ ಖಾನ್.

ದಾವಣಗೆರೆ,ಜುಲೈ,26,2022(www.justkannada.in):  ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಫೈಟ್  ನಡೆಯುತ್ತಿರುವ ವಿಚಾರ ಈಗಾಗಲೇ ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಈ ಮಧ್ಯೆ ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಐಸಿಸಿಯಿಂದ ಎಚ್ಚರಿಕೆಯ ನೋಟೀಸ್ ನೀಡಲಾಗಿದೆ ಎನ್ನಲಾಗಿತ್ತು.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, ನನಗೆ ಯಾವುದೇ ನೋಟೀಸ್ ಬಂದಿಲ್ಲ.   ಎಐಸಿಸಿಯಿಂದ ಈವರೆಗೆ ನನಗೆ ಯಾವುದೇ ನೋಟಿಸ್ ನೀಡಿಲ್ಲ. ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ.  ನಾನು ಪ್ರವಾಸ ಮಾಡ್ತಾ ಇದ್ದೀನಿ. ನನಗೆ ನೋಟೀಸ್ ಸಿಕ್ಕೇ ಇಲ್ಲ ಎಂದು ತಿಳಿಸಿದ್ದಾರೆ.

ಜಮೀರ್ ಬಗ್ಗೆ ಮಾತನಾಡಲ್ಲ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಟಾಂಗ್ ನೀಡಿದ ಜಮೀರ್ ಅಹ್ಮದ್ ಖಾನ್, ಡಿಕೆಶಿ ದೊಡ್ಡವರು ನಮ್ಮ ಪಕ್ಷದ ಅಧ್ಯಕ್ಷರು. ಅವರು ಯಾಕೆ ನನ್ನ ಬಗ್ಗೆ ಮಾತನಾಡುತ್ತಾರೆ. ಡಿಕೆಶಿ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

Key words: not –received- any notice – AICC-MLA -Zameer Ahmed Khan