Sunday, August 23, 2026

BDA Apartments

Home Front Page ನನಗೆ ಇಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ- ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ನನಗೆ ಇಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ- ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಬೆಂಗಳೂರು,ಅಕ್ಟೋಬರ್,3,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧ  ನನಗೆ ಇಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಚಿವ ಭೈರತಿ ಸುರೇಶ್ ಗೆ ನೋಟಿಸ್ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ಇಡಿ ನನಗೆ ಯಾವುದೇ ನೋಟಿಸ್ ನೀಡಿಲ್ಲ. ನನ್ನ ತೇಜೋವಧೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ.  ನನ್ನ ಮನೆಗೂ ಇಡಿ ನೋಟಿಸ್ ಅಂಟಿಸಿಲ್ಲ ಇಡಿ ನೋಟಿಸ್ ಕೊಟ್ಟಿದೆ ಅನ್ನೋದು ಸುಳ್ಳು ಎಂದರು.

ಸುಮ್ಮನೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮನೆಗೆ ನೋಟಿಸ್ ಅಂಟಿಸೋಕೆ ಅದೇನೋ ಪೋಸ್ಟ್ ಆಫೀಸಾ? ಮನೆಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಈ ರೀತಿ ಒಬ್ಬ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ಸಚಿವ ಭೈರತಿ ಸುರೇಶ್ ಕಿಡಿಕಾರಿದರು.

Key words:  not received, any notice, ED – Minister, Bhairati Suresh