ಸಿಎಂ ವಿಶ್ವಾಸ ಮತಯಾಚನೆಗೆ ಸಮಯ ಕೇಳಿದ್ದು ಸರಿಯಲ್ಲ – ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ..

ಬೆಂಗಳೂರು,ಜು,15,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆಗೆ ಸಮಯ ಕೇಳಿದ್ದು ಸರಿಯಲ್ಲ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಟೀಕಿಸಿದ್ದಾರೆ.

ವಿಧಾನಸಭೆ ಕಲಾಪ ಮುಂದೂಡಿಕೆಯಾದ  ಬಳಿಕ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ,  ಸಮ್ಮಿಶ್ರ ಸರ್ಕಾರ ಈಗಾಗಲೇ ಬಹುಮತ ಕಳೆದುಕೊಂಡಿದೆ.  ಹೀಗಾಗಿ ಗುರುವಾರದವರೆಗೆ ಸಿಎಂ ಹೆಚ್.ಡಿಕೆ ಟೈಂ ಕೇಳಿರುವುದು ಸರಿಯಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಬಹುಮತವಿಲ್ಲ ಅಂತಾ ಸಿಎಲ್ ಪಿ ಸಭೆಯಲ್ಲಿ ಚರ್ಚೆಯಾಗಿದೆ.  ವಿಪಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ಚರ್ಚಿಸಿದ್ದಾರೆ. ಹೀಗಾಗಿ ವಿಶ್ವಾಸಮತಯಾಚನೆಗೆ ಸಮಯ ಕೇಳಿದ್ದು ಸರಿಯಲ್ಲ ಎಂದರು.

ಗುರುವಾರ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹುಮತ ಸಾಬೀತುಪಡಿಸಲು ಸಮಯ ನಿಗದಿಯಾಗಿದ್ದು ಅಲ್ಲಿವರೆಗೆ ವಿಧಾನಸಭೆ ಕಲಾಪವನ್ನ ಮುಂದೂಡಲಾಗಿದೆ.

Key words: not right – CM – confidence vote- BJP MLA- KS Eshwarappa