Monday, September 14, 2026

BDA Apartments

ಜನರ ಹಿತ ಕಾಪಾಡಲು ಬದ್ಧ: ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋ...
Home Front Page ಜನರ ಹಿತ ಕಾಪಾಡಲು ಬದ್ಧ: ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ- ಸಿಎಂ ಸಿದ್ಧರಾಮಯ್ಯ.

ಜನರ ಹಿತ ಕಾಪಾಡಲು ಬದ್ಧ: ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ- ಸಿಎಂ ಸಿದ್ಧರಾಮಯ್ಯ.

ಮೈಸೂರು,ಸೆಪ್ಟಂಬರ್,26,2023(www.justkannada.in): ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧವಾಗಿದೆ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ. ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ ಎಂದು ಕಿಡಿಕಾರಿದರು.ಜನರ ಹಿತ ಕಾಪಾಡಲು ಬದ್ಧ siddaramaiah124

ಮೇಕೆದಾಟು ಯೋಜನೆಯಿಂದ ಕರ್ನಾಟಕ-ತಮಿಳುನಾಡು ನಡುವಿನ  ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಸಮಸ್ಯೆ ಸರಿಪಡಿಸಬಹುದು. ಮೇಕೆದಾಟು ಡ್ಯಾಂ ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು  ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: not right -failed – Cauvery issue- CM –Siddaramaiah