Sunday, August 2, 2026

BDA Apartments

Home Front Page ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ: 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು- ಬಿ.ವೈ...

ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ: 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು- ಬಿ.ವೈ ವಿಜಯೇಂದ್ರ.

ಚಾಮರಾಜನಗರ,ಜನವರಿ,6,2024(www.justkannada.in): ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಕೇಂದ್ರದ ಬಿಜೆಪಿಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುಂದೆ ಯಾವಾಗ ವಿಧಾನಸಭಾ ಚುನಾವಣೆ ಬರುತ್ತೆ ಎಂದು ಗೊತ್ತಿಲ್ಲ.  ಕಾರ್ಯಕರ್ತರೆ ನೀವು ಆಶೀರ್ವಾದ ಮಾಡಬೇಕು. 130 ರಿಂದ 140 ಸ್ಥಾನವನ್ನ  ಬಿಜೆಪಿ ನೀಡಬೇಕು. ಚಾಮರಾಜನಗರದ 4 ವಿಧಾನಸಭಾ ಕ್ಷೇತ್ರದಲ್ಲೂ ಕಮಲ ಅರಳಬೇಕು ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ನಮ್ಮ ಕೆಲ ಗೊಂದಲಗಳಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ.  ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕಾಗಿ ಕಾರ್ಯಕರ್ತರು ದುಡಿಯುತ್ತಾರೆ. ಆದರೆ ಕೆಲವು ನಮ್ಮ ನಾಯಕರು ಚುನಾವಣೆ ಬಂದಾಗ ನಾನು ಅಂತಾರೆ, ಅಧಿಕಾರಕ್ಕೆ ಬಂದ ಮೇಲೆ ನಾನು ಎಂದು ಓಡಾಡುತ್ತಾರೆ  ಹೇಳಿದರು.

ಮೂರು ರಾಜ್ಯಗಳಲ್ಲಿ ಹೇಗೆ ಬಿಜೆಪಿ ಗೆದ್ದಿದೆ ಅನ್ನೋದು ಕಣ್ಮುಂದೆ ಇದೆ. ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ BJP ಗೆಲ್ಲಬೇಕು.  ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯಗೆ ಆಪ್ತರು. 7 ತಿಂಗಳಿಂದ ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು  ಬಿವೈ ವಿಜಯೇಂದ್ರ ಕಿಡಿಕಾರಿದರು.

Key words: not – single -scandal – PM Modi’s -tenure- BY Vijayendra