Thursday, September 10, 2026

BDA Apartments

Home Front Page “ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ” : ಸಚಿವ ಕೆ.ಸಿ.ನಾರಾಯಣಗೌಡ

“ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ” : ಸಚಿವ ಕೆ.ಸಿ.ನಾರಾಯಣಗೌಡ

ಮಂಡ್ಯ,ಜನವರಿ,14,2021(www.justkannada.in): ಪಕ್ಷದಲ್ಲಿ ಯಾವ ಬಂಡಾಯವೂ ಇಲ್ಲ. ಶಾಸಕ ಯತ್ನಾಳ್ ಅವರ  ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಅದಕ್ಕೂ ಇತಿ ಮಿತಿಗಳಿರುತ್ತವೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.jk-logo-justkannada-mysoreಈಗಾಗಲೇ ಮುಖ್ಯಮಂತ್ರಿಗಳು ಎಲ್ಲ ಶಾಸಕರೊಂದಿಗೂ ಮಾತನಾಡುತ್ತಿದ್ದಾರೆ. ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಕೆಲವರಿಗೆ ನಿರಾಶೆ, ಆಕ್ರೋಶ ಆಗುವುದು ಸಹಜ. ಭಿನ್ನಾಭಿಪ್ರಾಯಗಳು ಬರುತ್ತವೆ. ಶೀಘ್ರ ಎಲ್ಲವೂ ಸರಿ ಹೋಗಲಿದೆ ಎಂದರು.

ವಿಶ್ವನಾಥ್ ಅವರು ನಮ್ಮ ಗುರುಗಳು. ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ನಾನೂ ಸಹ ಮುಖ್ಯಮಂತ್ರಿಗೆ ಒತ್ತಾಯ ಮಾಡುತ್ತೇನೆ. ಬಿಜೆಪಿ ಸೇರ್ಪಡೆಗೊಂಡಿದ್ದ 17 ಜನರ  ಪೈಕಿ  ವಿಶ್ವನಾಥ್ ಹಾಗೂ ಮುನಿರತ್ನ ಅವರಿಗೂ ಶೀಘ್ರ ಉನ್ನತ ಸ್ಥಾನಮಾನ ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.Not,all,ministers,Minister,K.C.Narayana Gowda

ಸಿಡಿ ವಿಚಾರ ನನಗೆ ಗೊತ್ತಿಲ್ಲ. ಪಕ್ಷದಲ್ಲಿ ಅಸಮಾಧಾನವಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ನೇತೃತ್ವದ ಉತ್ತಮ ಸರ್ಕಾರ ಆಡಳಿತ ನಡೆಸುತ್ತಿದೆ. ಶೀಘ್ರ ಎಲ್ಲವೂ ಸರಿ ಹೋಗುತ್ತದೆ.  ಪಂಚಮಸಾಲಿ ಸ್ವಾಮೀಜಿ ಪಾದಯಾತ್ರೆ ಕೈಗೊಂಡಿರುವುದು ಸರಿಯಲ್ಲ. ಪ್ರತಿಭಟನೆ ಮಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

key words : Not-all-ministers-Minister-K.C.Narayana Gowda