Sunday, September 20, 2026

BDA Apartments

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಸಂಸದೀಯ ಶಿಸ್ತು ಸಮಿತಿಯಿಂದ ನೋಟಿ...
Home Front Page ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಸಂಸದೀಯ ಶಿಸ್ತು ಸಮಿತಿಯಿಂದ ನೋಟಿಸ್…

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಸಂಸದೀಯ ಶಿಸ್ತು ಸಮಿತಿಯಿಂದ ನೋಟಿಸ್…

ಬೆಂಗಳೂರು,ಅ,4,2019(www.justkannada.in): ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಪಕ್ಷದ ವಿರುದ್ದ ಮಾತನಾಡಿದ್ದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಸಂಸದೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಪಕ್ಷದ ಮುಖಂಡರ ವಿರುದ್ದ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗರಂ ಆಗಿ ಮಾತನಾಡಿದ್ದರು. ಈ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾಗಿದೆ ಎಂಬ ಕಾರಣದಿಂದ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಅಲ್ಲದೆ 10 ದಿನಗಳೊಳಗೆ ನೋಟೀಸ್ ಗೆ ಉತ್ತರ ನೀಡಬೇಕು ಇಲ್ಲದಿದ್ದರೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗೆ ಎಚ್ಚರಿಕೆ ನೀಡಿದೆ.

Key words:  notice -BJP Parliamentary Disciplinary Committee-MLA-basanagowda patil yatnal