Friday, August 14, 2026

BDA Apartments

Home Front Page ಕಾಂಗ್ರೆಸ್ ಶಿಸ್ತು ಸಮಿತಿಯಿಂದ  ಶಾಸಕಿ ಸೌಮ್ಯರೆಡ್ಡಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್…

ಕಾಂಗ್ರೆಸ್ ಶಿಸ್ತು ಸಮಿತಿಯಿಂದ  ಶಾಸಕಿ ಸೌಮ್ಯರೆಡ್ಡಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್…

ಬೆಂಗಳೂರು,ನವೆಂಬರ್,7,2020(www.justkannada.in):  ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಖಾನ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ.jk-logo-justkannada-logo

ವಿಪಕ್ಷ ನಾಯಕ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆಂಬ ಬಗ್ಗೆ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಶಿಸ್ತು ಸಮಿತಿ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು  ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾರನ್ನು ಗೆಲ್ಲಿಸಿದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದರು.notice-congress-disciplinary-committee-mlas-soumya-reddy-mla-jameer-ahamad-khan

ಈ ಹಿನ್ನೆಲೆ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ ಮಾಡಿರುವ ಕಾಂಗ್ರೆಸ್ ಶಿಸ್ತು ಸಮಿತಿ ಒಂದು ವಾರದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದೆ.

Key words: Notice – Congress Disciplinary Committee – MLAs Soumya Reddy – MLA- jameer ahamad khan