ಸಿಎಂ ಸಿದ್ಧರಾಮಯ್ಯಗೆ ಹೈಕೋರ್ಟ್ ನಿಂದ ನೋಟಿಸ್..

ಬೆಂಗಳೂರು,ಜುಲೈ,28,2023(www.justkannada.in):  ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ಧರಾಮಯ್ಯಗೆ ನೋಟಿಸ್ ನೀಡಿದೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಅಮಿ ಒಡ್ಡಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಸಿಎಂ ಸಿದ್ಧರಾಮಯ್ಯಗೆ ನೋಟಿಸ್ ಜಾರಿ ಮಾಡಿದೆ.

Key words: Notice – High Court – CM -Siddaramaiah.