ಕೆಪಿಸಿಸಿ ಅಧ್ಯಕ್ಷರಿಗೆ ನೋಟಿಸ್: ನಿಯಮ ಮೀರಿ ಪಾದಯಾತ್ರೆ ಮಾಡಿದ್ರೆ ಕಾನೂನು ಕ್ರಮ- ರಾಮನಗರ ಎಸ್ಪಿ ಗಿರೀಶ್. 

ರಾಮನಗರ,ಜನವರಿ,8,2022(www.justkannada.in): ಪಾದಯಾತ್ರೆ ಮಾಡದಂತೆ ಕೆಪಿಸಿಸಿ ಅಧ್ಯಕ್ಷರಿಗೆ ನೋಟಿಸ್ ನೀಡಲಾಗಿದೆ. ನಿಯಮ ಮೀರಿ ಪಾದಯಾತ್ರೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಮನಗರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗಿರೀಶ್  ತಿಳಿಸಿದ್ದಾರೆ.

ಈ ಕುರಿತು ಇಂದು ಕನಕಪುರ ತಾಲ್ಲೂಕು  ಮರಳೆ ಗ್ರಾಮದಲ್ಲಿ ಮಾತನಾಡಿದ ಎಸ್ಪಿ ಗಿರೀಶ್, ಪಾದಯಾತ್ರೆಗೆ ಅನುಮತಿ ನೀಡಲಾಗುವುದಿಲ್ಲ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗುವುದಿಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ ಪಾದಯಾತ್ರೆ ಮಾಡಬಾರದೆಂದು ನೋಟೀಸ್ ಕೊಟ್ಟಿದ್ದೇವೆ.  ಪಾದಯಾತ್ರೆಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಪಾದಯಾತ್ರೆ ಮಾಡುವುದು ತಪ್ಪು ಎಂದು ಕೇಳಿಕೊಳ್ಳುತ್ತೇನೆ. ನಿಯಮ ಮೀರಿ ಪಾದಯಾತ್ರೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಯಾರನ್ನು ವಶಕ್ಕೆ ಪಡೆಯಲ್ಲ.  ರಾಜ್ಯ ಸರ್ಕಾರದ ನಿಯಮ ಪಾಲಿಸಿದರೇ ಒಳ್ಳೆಯದು ಇಲ್ಲದಿದ್ದರೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಪಾದಯಾತ್ರೆಗಾಗಿ ನಾವು ಬಂದೋಬಸ್ತ್ ಮಾಡುತ್ತಿಲ್ಲ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ. ಭದ್ರತೆಗೆ 1200 ಪೊಲೀಸರು ನಿಯೋಜನೆ ಮಾಡಲಾಗಿದೆ ಎಂದು ಎಸ್ಪಿ ಗಿರೀಶ್ ತಿಳಿಸಿದರು.

Key words: Notice – KPCC- President- Ramanagara -SP- Girish