ನವದೆಹಲಿ,ಡಿಸೆಂಬರ್,22,2025 (www.justkannada.in): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 2026 ರಲ್ಲಿ ನಡೆಯಲಿದೆ.
ಪ್ರಕರಣ ಸಂಬಂಧ ಇಡಿ ಸಲ್ಲಿಸಿದ್ದ ಚಾರ್ಜ್ ಶೀಟ್ ಅನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
Key words: High Court, issues, notice, Sonia Gandhi, Rahul Gandhi







