ಕೇಂದ್ರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿರುವ ವಿಚಾರ: ಸಿಎಂ ಭೇಟಿ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಫೇ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಕೋರ್ಟ್ ಆದೇಶಕ್ಕನುಗುಣವಾಗಿ ಕೇಂದ್ರಸರ್ಕಾರ ಅಧಿಸೂಚನೆ ಹೊರಡಿಸಿದ್ದು ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದರು.

ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸುಪ್ರೀಂಕೋರ್ಟ್  ಆದೇಶದಂತೆ ನೋಟಿಫಿಕೇಷನ್ ಹೊರಡಿಸಲಾಗಿದೆ. ಮಹದಾಯಿ ನೀರಿಗಾಗಿ ಹೋರಾಟ ಮಾಡಿದ ಮಹದಾಯಿ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಬಿಎಸ್ ವೈ ಭೇಟಿ ವೇಳೆ ಬಜೆಟ್ ನಲ್ಲಿ ಮಹದಾಯಿಗಾಗಿ  ಕನಿಷ್ಟ 400 ಕೋಟಿ ಮೀಸಲಿಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Key words: notification –mahadayi- Union Minister- Prahlad Joshi-CM-bs yeddyurappa