ನ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ.

ಮೈಸೂರು,ನವೆಂಬರ್,17,2022(www.justkannada.in):  ಕಂದಾಯ ಸಚಿವರಾದ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ನಡೆ – ಹಳ್ಳಿ ಕಡೆ ಕಾರ್ಯಕ್ರಮವನ್ನ ನವೆಂಬರ್ 19 ರಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ(ಭೀಮನಕೊಲ್ಲಿ ದೇವಸ್ಧಾನ ಆವರಣ) ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಮಳಿಗೆಗಳನ್ನು ಸ್ಧಾಪಿಸಲಾಗುತ್ತಿದೆ. ಸದರಿ ಮಳಿಗೆಗಳಲ್ಲಿ ವಿವಿಧ ಯೋಜನೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಹಾಗೂ ಸವಲತ್ತುಗಳನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಮಾಹಿತಿ ಇರುತ್ತದೆ.

ಮೈಸೂರು ಜಿಲ್ಲೆಯ ಎಲ್ಲ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Nov. 19-DC-Grama- Request -advantage –program