Thursday, August 6, 2026

BDA Apartments

Home Front Page ನೂಪುರ್ ಶರ್ಮಾ, ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ನೂಪುರ್ ಶರ್ಮಾ, ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ಕಲ್ಬುರ್ಗಿ/ಬೀದರ್,ಜೂನ್,13,2022(www.justkannada.in):  ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ  ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ಇಂದು ಬೀದರ್ ಹಾಗೂ ಕಲ್ಬುರ್ಗಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಹೇಳಿಕೆ ಖಂಡಿಸಿ ಡಿಸಿ ಕಚೇರಿ ಬಳಿ ನೂರಾರು ಮುಸ್ಲೀಂರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಬೀದರ್ ನಲ್ಲಿ ಡಿಸಿ ಕಚೇರಿ ಎದುರು  ಶಾಂತಿಯುತ ಪ್ರತಿಭಟನೆ ನಡೆಸಿದ ಮುಸ್ಲೀಂ ಸಂಘಟನೆಗಳು ಎಸ್.ಪಿ  ಡೆಕ್ಕ ಕಿಶೋರ್ ಬಾಬು ಅವರಿಗೆ ಮನವಿ ಸಲ್ಲಿಸಿದರು.

ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ  ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಬಂಧಿಸಿ ಗಲ್ಲಿಗೇರಿಸುವಂತೆ ಒತ್ತಾಯಿಸಿದರು.

Key words: Nupur Sharma – Naveen Jindal-protest-muslim- organizations