ವಿಧಾನ ಪರಿಷತ್ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂನ್,24,2024 (www.justkannada.in): ವಿಧಾನ ಪರಿಷತ್ ಗೆ  ನೂತನವಾಗಿ ಆಯ್ಕೆಯಾದ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ವಿಧಾನಸಭೆಯಿಂದ ಆಯ್ಕೆಯಾದ 11 ಹಾಗೂ ಪದವೀಧರ, ಶಿಕ್ಷಕರ ಕ್ಷೇತ್ರಗಳಿಂದ ಆರು ಸೇರಿ ಒಟ್ಟು 17 ಜನರು ವಿಧಾನ ಪರಿಷತ್ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ  ಪ್ರಮಾಣ ವಚನ ಬೋಧಿಸಿದರು.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜು, ಐವನ್ ಡಿ.ಸೋಜಾ, ಜಗದೇವ ಗುತ್ತೇದಾರ್, ಟಿ.ಎನ್.ಜವರಾಯಿಗೌಡ, ಬಲ್ಕಿಸ್ ಬಾನು, ಮಾರುತಿರಾವ್ ಮುಳೆ, ಡಾ.ಯತೀಂದ್ರ.ಎಸ್, ಸಿ.ಟಿ.ರವಿ, ಎನ್.ರವಿಕುಮಾರ್, ಎ.ವಸಂತಕುಮಾರ್, ಎನ್.ರವಿಕುಮಾರ್, ಹಾಗೂ ಪದವೀಧರ, ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಡಾ.ಚಂದ್ರಶೇಖರ ಪಾಟೀಲ, ಡಾ.ಧನಂಜಯ ಸರ್ಜಿ, ರಾಮೋಜಿಗೌಡ, ಎಸ್.ಎಲ್.ಭೋಜೇಗೌಡ, ಕೆ.ವಿವೇಕಾನಂದ ಮತ್ತು ಡಿ.ಟಿ.ಶ್ರೀನಿವಾಸ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.

Key words: oath -new members – Legislative Council