ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ- ಇಂಧನ ಸಚಿವ ಸುನೀಲ್ ಕುಮಾರ್.

ಬೆಂಗಳೂರು,ಜುಲೈ,2,2022(www.justkannada.in):  ವಿದ್ಯುತ್ ಸಂಪರ್ಕ ಪಡೆಯಲು ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. ಆದರೆ ಇದೀಗ  ಓಸಿ ನಿಯಮವನ್ನು ಕೆಇಆರ್​ಸಿ ತೆಗೆದು ಹಾಕಿದ್ದು, ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಿಲ್ಲ.

ವಿದ್ಯುತ್ ಸಂಪರ್ಕ ಪಡೆಯಲು  ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳಿಂದ ಒಸಿ ಪಡೆಯಬೇಕಾಗಿತ್ತು. ಒಸಿ ಇದ್ದವರಿಗೆ ಮಾತ್ರ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಸಿಎಂ ಅನುಮೋದನೆಯೊಂದಿಗೆ ಸರ್ಕಾರ ಮನವಿ ಸಲ್ಲಿಸಿದ್ದು, ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ನಿಯಮ ತೆಗೆದುಹಾಕಿದೆ.

ಈ ಕುರಿತು ಟ್ವೀಟ್ ಮಾಡಿರುವ  ಇಂಧನ ಸಚಿವ ವಿ. ಸುನೀಲ್ ಕುಮಾರ್, ಕಟ್ಟಡಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ನಿರಾಕ್ಷೇಪಣಾ ಪತ್ರ (ಓಸಿ) ಇಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಣೆ ಇನ್ನು ಸಾಧ್ಯವಿಲ್ಲ. ಕಾಂಗ್ರೆಸ್ ಕಾಲದ ಈ ‘ಕತ್ತಲೆಭಾಗ್ಯದ’ ನಿಯಮವನ್ನು ಕೊನೆಗೂ ನಿವಾರಿಸಿದ್ದೇವೆ. ನಿಯಮ ಬದಲಾಯಿಸಿ KREC ಹೊರಡಿಸಿದ್ದ ಆದೇಶ ಇಂದಿನಿಂದಲೇ ರಾಜ್ಯಪತ್ರದ ಮೂಲಕ ಜಾರಿಗೆ ಬರುತ್ತಿದೆ. ಸರ್ವರಿಗೂ ಬೆಳಕು ಎಂಬ ನಮ್ಮ ಧ್ಯೇಯವಾಕ್ಯಕ್ಕೆ ಇನ್ನು ಯಾವುದೇ ಅಡ್ಡಿ ಇಲ್ಲ ಎಂದು  ತಿಳಿಸಿದ್ದಾರೆ.

Key words: OC – not -mandatory – get electricity –connection-Minister -Sunil Kumar.