ಏಕದಿನ ವಿಶ್ವಕಪ್ 2023: ಇಂದು ಇಂಡಿಯಾ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ.

ಬೆಂಗಳೂರು,ಅಕ್ಟೋಬರ್,14,2023(www.justkannada.in): ವಿಶ್ವದ ಬಹು ನಿರೀಕ್ಷಿತ ಕ್ರಿಕೆಟ್​ ಕದನಕ್ಕೆ ಕೌಂಟ್​​ ಡೌನ್​ ಶುರುವಾಗಿದ್ದುಇಂದು ಏಕದಿನ ವಿಶ್ವಕಪ್ 2023  ಭಾರತ-ಪಾಕಿಸ್ತಾನದ ನಡುವೆ ಹಣಾಹಣಿ ನಡೆಯಲಿದೆ.

ಇಂದು  ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿಪಾಕಿಸ್ತಾನ ಎದುರಿಸಲಿದ್ದು, ಈ ಹೈವೋಲ್ಟೇಜ್ ಪಂದ್ಯ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.

ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದರೆ, ಬಾಬರ್ ಅಝಂ ಪಾಕ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ಎರಡೂ ತಂಡಗಳು ಈಗಾಗಲೇ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಇದೀಗ ಈ ಪಂದ್ಯದಲ್ಲಿ ಯಾರು ಹ್ಯಾಟ್ರಿಕ್ ಗೆಲುವು ಸಾಧಿಸಲಿದ್ದಾರೆ ಎಂದು ಕಾದುನೋಡಬೇಕಿದೆ.

ಇಂದು ಮಧ್ಯಾಹ್ನ 2 ಗಂಟೆಗೆ  ಪಂದ್ಯ ಆರಂಭವಾಗಲಿದೆ. ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ 7 ಬಾರಿ ಮುಖಾಮುಖಿಯಾಗಿದ್ದು 7ರಲ್ಲಿ ಭಾರತ ಗೆಲುವು ಸಾಧಿಸಿದೆ.  8ನೇ ಬಾರಿಗೆ ಗೆಲುವು ಸಾಧಿಸಲು ಟೀಂ ಇಂಡಿಯಾ ಸಜ್ಜಾಗಿದೆ.

ಭಾರತದ ತಂಡ.

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್

ಪಾಕಿಸ್ತಾನ ತಂಡ…

ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ವಾಸಿಂ.

Key words:  ODI World Cup 2023-Countdown -India-Pak -high voltage –match- today.