Sunday, September 20, 2026

BDA Apartments

10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ BDA JK_Adv BDA Adv
Home Crime 10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು,ಜೂನ್,18,2025 (www.justkannada.in): 10 ಲಕ್ಷ ರೂ. ಲಂಚ  ಸ್ವೀಕರಿಸುವ ವೇಳೆ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.  ಓರ್ವ ಗುತ್ತಿಗೆದಾರರ ಕಡತ ಫಾರ್ವರ್ಡ್ ಗೆ  10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಮಧ್ಯೆ ಯರಪ್ಪ ರೆಡ್ಡಿ 10 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಣದ ಸಹಿತ ಯರಪ್ಪ ರೆಡ್ಡಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.vtu

Key words: officer, accepting, bribe, Rs. 10 lakh, Lokayukta, Raid