ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಧಿಕೃತ ಉಚ್ಚಾಟನೆ.

ಬೆಂಗಳೂರು,ಡಿಸೆಂಬರ್,9,2023(www.justkannada.in):  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಅಸಮಾಧಾನಗೊಂಡು ಪಕ್ಷದ ನಾಯಕರ ವಿರುದ್ದ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರನ್ನ ಜೆಡಿಎಸ್ ನಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

ಜೆ.ಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ  ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ ಇಬ್ರಾಹಿಂ ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಒಮ್ಮತದ ನಿರ್ಧಾರ ಕೈಗೊಳ್ಳಾಗಿದೆ.

2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ  ಮಾಡಿಕೊಂಡಿದ್ದು ಈ ಹಿನ್ನೆಲೆಯಲ್ಲಿ  ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬೇಸರಗೊಂಡಿದ್ದರು.  ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು.

ಸಿಎಂ ಇಬ್ರಾಹಿಂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಇಂದು ಪಕ್ಷದಿಂದ ಉಚ್ಚಾಟನೆಗೊಳಿಸಿರುವುದಾಗಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸಭೆಯ ಬಳಿಕ ತಿಳಿಸಿದ್ದಾರೆ.

Key words: Official -expulsion – CM Ibrahim- from- JDS party.