ಪಂಚರಾಜ್ಯ ಚುನಾವಣೆ ಬಳಿಕ ತೈಲ ಬೆಲೆ ಏರಿಕೆ- ಕೇಂದ್ರ ಸರ್ಕಾರದ ವಿರುದ್ಧ ಸಿದ‍್ಧರಾಮಯ್ಯ ವಾಗ್ದಾಳಿ.

ಬೆಂಗಳೂರು,ಮಾರ್ಚ್,23,2022(www.justkannada.in):  ಪಂಚರಾಜ್ಯಗಳ ಚುನಾವಣೆ ಬಳಿಕ ತೈಲ ಬೆಲೆ ಏರಿಕೆ ಮಾಡಿದ್ದಾರೆ. ತೈಲ ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿದ್ಧರಾಮಯ್ಯ, ಕೇಂದ್ರದಿಂದ ಜನರಿಗೆ ಮತ್ತೆ ಬೆಲೆ ಏರಿಕೆ ಬಿಸಿ  ತಟ್ಟಿದೆ. ಪಂಚರಾಜ್ಯ ಚುನಾವಣೆ ವೇಳೆ ತೈಲ ಬೆಲೆ ಕಡಿಮೆ ಮಾಡಿ  ಚುನಾವಣೆ ಮುಗಿದ ಬಳಿಕ ತೈಲ ಬೆಲೆ ಏರಿಸಿದ್ದಾರೆ ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗುತ್ತಿದೆ. ತೈಲ ಬೆಲೆ ಏರಿಕೆಯನ್ನ ಖಂಡಿಸುತ್ತೇವೆ. ತಕ್ಷಣ ಪೆಟ್ರೋಲ್ ಡೀಸೆಲ್ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ರೀತಿ ಅವಕಾಶ ನಿರಾಕರಿಸುವುದು ತಪ್ಪು. ಅಂಗಡಿ ಟೆಂಡರ್ ನಿರಾಕರಿಸುವುದು, ಅವಕಾಶ ನಿರಾಕರಣೆ ಮಾಡುವುದು ದೌರ್ಜನ್ಯ ಎನಿಸಿಕೊಳ್ಳುತ್ತದೆ. ಇದು ಮೂಲಭೂತ ಹಕ್ಕನ್ನು ಹತ್ತಿಕ್ಕುವ ಕೆಲಸ. ಇದು ಸಂಪೂರ್ಣ ಕಾನೂನು ಬಾಹಿರ.  ನಮ್ಮ ದೇಶದಲ್ಲಿ ಮುಕ್ತ ವ್ಯಾಪಾರಕ್ಕೆ ಅವಕಾಶವಿದೆ. ಮುಕ್ತ ವ್ಯಾಪಾರಕ್ಕೆ ನಿರ್ಬಂಧಿಸುವುದು ಕಾನೂನುಬಾಹಿರವಾಗುತ್ತದೆ ಎಂದು ಹೇಳಿದರು.

Key words: Oil prices –hike-former CM-Siddhiramaiah