ಒಮಿಕ್ರಾನ್ ಆತಂಕ; ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ.

ಬೆಂಗಳೂರು,ಡಿಸೆಂಬರ್,3,2021(www.justkannada.in):  ರಾಜ್ಯಕ್ಕೆ ಒಮಿಕ್ರಾನ್ ಕಾಲಿಟ್ಟಿರುವ ಹಿನ್ನೆಲೆ ಆತಂಕ ಶುರುವಾಗಿದ್ದು ಈ ಮಧ್ಯೆ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದ್ದು ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು, ತಜ್ಞರು, ಸಚಿವರ ಜತೆ ಸಭೆ ನಡೆಯಿತು.

ಎಲ್ಲರೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಬೇಕು. ವ್ಯಾಕ್ಸಿನೇಷನ್ ಹೆಚ್ಚಳ ಮಾಡಬೇಕು.  ಮಾಸ್ಕ್ ಕಡ್ಡಾಯಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದು. ಏರ್ ಪೋರ್ಟ್ ಗಳಲ್ಲಿ ಕಠಿಣ ಕ್ರಮ, ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಹೊಸ ಮಾರ್ಗಸೂಚಿ ಮುಂತಾದ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನು ಈ ಬಾರಿ ಬೆಳಗಾವಿಯಲ್ಲೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

Key words: Omicron –anxiety-CM Basavaraja Bommai-meeting