ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ: ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ.

ಮೈಸೂರು,ಡಿಸೆಂಬರ್,28,2021(www.justkannada.in): ಕೇರಳದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ, ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕು ಆರೋಗ್ಯಧಿಕಾರಿ ಸೂಚನೆ ನೀಡಿದ್ದಾರೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ  ಬಾವಲಿ ಚೆಕ್ ಪೋಸ್ಟ್ ಗೆ ತಾಲ್ಲೂಕು ಆರೋಗ್ಯಾಧಿಕಾರಿ ರವಿ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.  ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ  ಕೇರಳದಿಂದ ಜನರು ಆಗಮಿಸುತ್ತಿದ್ದು ಹೀಗಾಗಿ ಸದ್ಯ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಕೋವಿಡ್ ವರದಿಯನ್ನ ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದು ಅರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಆರೋಗ್ಯಧಿಕಾರಿ ರವಿಕುಮಾರ್ ಸೂಚನೆ ನೀಡಿದರು.

Key words: Omicron-increasing -strict action – Karnataka-Kerala -border