Tuesday, September 22, 2026

BDA Apartments

ಕೆಎಸ್ಒಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಆನ್’ಲೈನ್ ತರಬೇತಿ BD...
Home Front Page ಕೆಎಸ್ಒಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಆನ್’ಲೈನ್ ತರಬೇತಿ

ಕೆಎಸ್ಒಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಆನ್’ಲೈನ್ ತರಬೇತಿ

ಮೈಸೂರು, ಜೂನ್ 07, 2020 (www.justkannada.in): ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಹಾಗೂ ಇತರೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿ ಆಯೋಜಿಸಲಾಗಿದೆ.

ಈ ತರಬೇತಿಗೆ ಜೂನ್ 9 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದಲೇ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಚಾಲನೆ ನೀಡಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಭಾಷಣ ಮಾಡುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಾದೇಶಿಕ ಅಪರ ಆಯುಕ್ತೆ ಕೆ.ಎಂ.ಗಾಯತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಲಿಂಗರಾಜಗಾಂಧಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.