ಪತ್ರಕರ್ತನ  ಚಿಕಿತ್ಸೆಗೆ  ಒಂದು ಲಕ್ಷ ರೂ. ಮಂಜೂರು ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಆಗಸ್ಟ್,19,2021(www.justkannada.in): ಯಾದಗಿರಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರ ರುದ್ರಯ್ಯ ದಂಡಗಿಮಠ ಅವರ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡಿದ ಮನವಿ ಮೇರೆಗೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.

ಯಾದಗಿರಿ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ರುದ್ರಯ್ಯ ಅವರ ಮನೆಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಈ ಸಂದರ್ಭದಲ್ಲಿ ರುದ್ರಯ್ಯ ಅವರಿಗೆ ಆರ್ಥಿಕ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಮಾಡಿಕೊಂಡಿತ್ತು.

ಈ ಹಿನ್ನೆಲೆಯಲ್ಲಿ ರುದ್ರಯ್ಯ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆಗಳನ್ನು ಸಲ್ಲಿಸಿದೆ.

Key words: One lakh – treatment – journalist. -CM Basavaraja Bommai