ಬಾಕಿ ಬಿಲ್ ಬಿಡುಗಡೆಗೆ ಒಂದು ತಿಂಗಳು ಡೆಡ್ ಲೈನ್: ಬೇಡಿಕೆ ಈಡೇರದಿದ್ರೆ ಉಗ್ರ ಹೋರಾಟ- ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಗುತ್ತಿಗೆದಾರರ ಸಂಘ.

ಬೆಂಗಳೂರು ಅಕ್ಟೋಬರ್ 13,2023(www.justkannada.in): ಗುತ್ತಿಗೆದಾರರಿಗೆ 20 ಸಾವಿರ ಕೋಟಿ ರೂ. ಬಾಕಿ ಬಿಲ್ ಬರಬೇಕಿದೆ. ಒಂದು ತಿಂಗಳಲ್ಲಿ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಚ್ಚರಿಕೆ ನೀಡಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಂಪಣ್ಣ, ಬಾಕಿ ಬಿಲ್​ ಪಾವತಿಸುವಂತೆ ನಾಲ್ಕು ನಾಲ್ಕು ಬಾರಿ  ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಸರ್ಕಾರ ಬಂದು ಐದು ತಿಂಗಳಾಗಿದೆ. ಅದರೆ ಇದುವರೆಗೆ ಬಾಕಿ ಬಿಲ್  ಪಾವತಿ ಮಾಡಿಲ್ಲ. ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಂದ ಬಾಕಿ ಬರಬೇಕು. ಕೆಲವು ಇಲಾಖೆಗಳಲ್ಲಿ ಶೇಕಡಾ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಇಂದಿನಿಂದ ಸರ್ಕಾರಕ್ಕೆ 30 ದಿನ ಗಡವು ನೀಡುವುತ್ತೇವೆ. ಕರೆದು ಮಾತನಾಡಿ ಬಗೆ ಹರಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ಹೇಳಿದರು.

ಹಳೇ ಸಮಸ್ಯೆಗಳ ಜೊತೆ ಹೊಸ ಸಮಸ್ಯೆ ಸಹ ಸೇರ್ಪಡೆಯಾಗಿದೆ. ತನಿಖೆ ಹೆಸರಲ್ಲಿ ರಾಜ್ಯ ಸರ್ಕಾರ ಬಾಕಿ ಹಣ ತಡೆಹಿಡಿದಿದೆ. ಒಂದು ತಿಂಗಳಲ್ಲಿ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು. ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಬಗ್ಗೆ ಕೇಳಿದರೇ ಗೊತ್ತಿಲ್ಲ ಅಂತಾ ಇಂಜಿನಿಯರ್​​​ಗಳು ಹೇಳುತ್ತಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್​ ಪಾವತಿ ಮಾಡದಿದ್ದರೇ ಪ್ರತಿಭಟನೆ ಮಾಡುತ್ತೇವೆ ಎಂದು ಕೆಂಪಣ್ಣ ತಿಳಿಸಿದರು.

Key words: One month- dead line – release –pending-bill- Contractors -association -government.