ಒಂದು ರಾಷ್ಟ್ರ, ಒಂದು ಚುನಾವಣೆ: ಪರಿಶೀಲನೆಗೆ ರಮನಾಥ್ ಕೋವಿಂದ್  ನೇತೃತ್ವದಲ್ಲಿ ಸಮಿತಿ ರಚನೆ

ನವದೆಹಲಿ,ಸೆಪ್ಟಂಬರ್,1,2023(www.justkannada.in):  ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸಲು  ಮುಂದಾಗಿದ್ದು ಈ ಸಂಬಂಧ ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

2014 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಳಗೊಂಡಿರುವ ಏಕಕಾಲಿಕ ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಾ ಬಂದಿದ್ದಾರೆ.  ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆ ಪರಿಕಲ್ಪನೆಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ ಮಾಜಿ ರಾಷ್ಟ್ರಪತಿ ರಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚಿಸಿದೆ.

ಸೆಪ್ಟಂಬರ್ 18ರಿಂದ ಸೆಪ್ಟಂಬರ್ 22 ರವರೆಗೆ ಸಂಸತ್ ವಿಶೇಷ ಅಧಿವೇಶನವಿದ್ದು  ಮಸೂದೆ ಮಂಡನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: One nation-one election-Committee – Ramnath Kovind -review