Thursday, October 15, 2026

Dasara Wishes

Happy Dasara
Home Front Page ಶೀಘ್ರವೇ ಒನ್ ನೇಷನ್ ಒನ್ ಎಲೆಕ್ಷನ್ ಜಾರಿ – ಪ್ರಧಾನಿ ಮೋದಿ

ಶೀಘ್ರವೇ ಒನ್ ನೇಷನ್ ಒನ್ ಎಲೆಕ್ಷನ್ ಜಾರಿ – ಪ್ರಧಾನಿ ಮೋದಿ

ಗುಜರಾತ್ ,ಅಕ್ಟೋಬರ್,31,2024 (www.justkannada.in): ಶೀಘ್ರವೇ ಒನ್ ನೇಷನ್ ಒನ್ ಎಲೆಕ್ಷನ್ ಜಾರಿ  ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಭಾರತದ ಉಕ್ಕಿನ ಮನುಷ್ಯ ಸರದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಹಿನ್ನೆಲೆಯಲ್ಲಿ ಗುಜರಾತನ ಕೆವಡಿಯಾದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ  ಪ್ರಧಾನಿ ನರೇಂದ್ರ ಮೋದಿಶೀಘ್ರದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಇಡೀ ದೇಶವನ್ನು ಒಂದಾಗಿ ಮಾಡಿದ್ದು ಸರ್ದಾರ್  ವಲ್ಲಭಭಾಯಿ ಪಟೇಲ್. ಅವರು ದೇಶದ ಏಕತೆ ರಕ್ಷಣೆಗಾಗಿ ಶ್ರಮಿಸಿದ ಉಕ್ಕಿನ ಮನುಷ್ಯ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಸೇವೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದರು.

ದೇಶದ ಸಮಗ್ರ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ಧ ಜನರಿಗಾಗಿ ನಮ್ಮ ಸರ್ಕಾರ ಹಲವು ಯೋಜನೆ ಜಾರಿ ಮಾಡಿದ್ದೇವೆ.  ಜನರಿಗಾಗಿ ನಮ್ಮ ಸರ್ಕಾರ ಹಲವು ಯೋಜನೆಗಳನ್ನ ಜಾರಿ ಮಾಡಿದೆ.  ಆಯುಷ್ಮಾನ್ ಯೋಜನೆಯಿಂದ ಬಡವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತದೆ. ಆಯುಷ್ಮಾನ್ ಯೋಜನೆಯನ್ನ ಈಗ 70 ವರ್ಷ ಮೇಲ್ಪಟ್ಟ ಹಿರಿಯರಿಗೂ ವಿಸ್ತರಣೆ ಮಾಡಲಾಗುತ್ತದೆ ಎಂದರು.

Key words: One Nation One Election, implemente, soon, PM Modi