ಮಾಸ್ಕ್ ಧರಿಸದವರಿಗೆ ಒಂದು ಸಾವಿರ ರೂ. ದಂಡ ವಿಚಾರ: ಇನ್ನೂ ಆದೇಶ ಬಂದಿಲ್ಲ ಎಂದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್..

ಬೆಂಗಳೂರು,ಅಕ್ಟೋಬರ್,1,2020(www.justkannada.in):  ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ  ಒಂದು ಸಾವಿರ ರೂ. ದಂಡ  ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಇನ್ನೂ ಯಾವುದೇ ಆದೇಶ ಬಂದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಓಡಾಡುವವರಿಗೆ ದಂಡದ ಮೊತ್ತವನ್ನು 200 ರೂ ನಿಂದ ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಆದರೆ ಈ ಬಗ್ಗೆ ಸರ್ಕಾರದಿಂದ  ಆದೇಶ ಬಂದಿಲ್ಲ. ಆದೇಶ ಬಂದ ಬಳಿಕ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.One thousand - do not -wear – mask-fine-BBMP Commissioner -Manjunath Prasad

ಕೊರೋನಾ ತಡೆಗೆ ಕಡ್ಡಾಯವಾಗಿ ಮಾಸ್ಕ್ ಬಳಕೆ ಅನಿವಾರ್ಯ, ಪದೇ ಪದೇ ಮಾಸ್ಕ್ ಧರಿಸದೇ ಓಡಾಡಿದರೇ ಕೇಸ್ ಹಾಕಲಾಗುತ್ತದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.

Key words: One thousand – do not -wear – mask-fine-BBMP Commissioner -Manjunath Prasad