ಹಂಪಿಯಲ್ಲೂ ಪ್ರವಾಸಿಗರಿಗೆ ನಿರ್ಬಂಧ: ಒಂದು ವಾರ ನೋ ಎಂಟ್ರಿ

ಬೆಂಗಳೂರು, ಮಾರ್ಚ್ 15, 2020 (www.justkannada.in): ವಿಶ್ವವಿಖ್ಯಾತ ಪ್ರವಾಸಿ ತಾಣ ಹಂಪಿಯಲ್ಲಿ ಪ್ರವಾಸಿಗರನ್ನು ಒಂದು ವಾರ ಕಾಲ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾ ದಂಡಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.

ಮಾ.15 ಬೆಳಿಗ್ಗೆ 6 ರಿಂದ ಮಾ.22ರ ಬೆಳಗ್ಗೆ 6ರವರೆಗೆ ಒಂದು ವಾರ ಹಂಪಿಯಲ್ಲಿ ಯಾವುದೇ ಪ್ರವಾಸಿಗರಿಗೆ ಪ್ರವೇಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

1 ರಿಂದ 6ನೇ ತರಗತಿಯವರೆಗೆ ಯಾವುದೇ ಪರೀಕ್ಷೆಗಳಿಲ್ಲದೆ ರಜೆ ಘೋಷಿಸಲಾಗಿದೆ. 7 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ದಿನದಂದು ಪರಿಕ್ಷೆಗೆ ಹಾಜರಾಗಲು ಸೂಚಿಸಿದೆ. ಎಸ್ಸೆಸ್ಸೆಲ್ಸಿ, ಪಿ.ಯು.ಸಿ ಪರಿಕ್ಷೆಗಳು ನಿಗದಿತ ದಿನಾಂಕದಂದು ನಡೆಯಲಿವೆ ಎಂದು ತಿಳಿಸಿದ್ದಾರೆ.