ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ- ಕಾಲೆಳೆದ ಸತೀಶ್ ಜಾರಕಿಹೊಳಿ.

ಬೆಳಗಾವಿ,ಸೆಪ್ಟಂಬರ್,24,2022(www.justkannada.in):  ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಹೋದರ ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ಸಹೋದರರಿಗೆ ಸರ್ಕಾರ ಬದಲಿಸುವ ಶಕ್ತಿ ಇದೆ ಅಂತಾರೆ . ನಾವು ನಾಲ್ವರು ಸಹೋದದರು ಇದ್ದೇವೆ.  ನಾಲ್ವರು ಒಂದೇ ಎಂದು ಭಾವಿಸಬಾರದು ನಾಲ್ವರು ಸಹೋದರರ ಕೆಲಸವೂ ಬೇರೆ ಬೇರೆ ಇದೆ.  ಕನ್ ಪ್ಯೂಸ್ ಆಗಬೇಡಿ ಎಂದರು.

ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ.  ಉಳಿದ ಸಹೋದರರು ಸರ್ಕಾರದ ಪತನದ ಭಾಗವಲ್ಲ. ಹೀಗಾಗಿ ಮತ್ತೆ ರಮೇಶ್ ಜಾರಕಿಹೊಳಿ ಅವರು ಸರ್ಕಾರ ಉರುಳಿಸುವ ಪ್ರಯತ್ನ ಮಾಡಲೆಂದು ಪ್ರಾರ್ಥಿಸೋಣ ಎಂದು ವ್ಯಂಗ್ಯವಾಡಿದರು.

Key words: Only- Ramesh Jarakiholi – power – Toppling- government.