Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅವಕಾಶ: ಪ್ರವಾಸೋದ್ಯಮ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸಿಎಂ ಬಿಎಸ್ ವೈ….

ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅವಕಾಶ: ಪ್ರವಾಸೋದ್ಯಮ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸಿಎಂ ಬಿಎಸ್ ವೈ….

ಬೆಂಗಳೂರು,ಜೂ,6,2020(www.justkannada.in):  ಲಾಕ್ ಡೌನ್ ನಿಂದ ಬಂದ್ ಆಗಿದ್ದ ಪ್ರವಾಸೋದ್ಯಮ ಆರಂಭಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಮಾರ್ಗಸೂಚಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.open -hotel –restaurant-  CM BS Yeddyurappa - released - tourism.

ಈ ಸಭೆಯಲ್ಲಿ ‌ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ‌ ಸಂಘ ಹಾಗು ಟ್ಯಾಕ್ಸಿ ಮಾಲಿಕರ‌ ಸಂಘಗಳ ನಿಯೋಗವು ಸರ್ಕಾರದ ಮುಂದೆ‌ ಕೆಲ ಬೇಡಿಕೆಗಳನ್ನು‌ ಮುಂದಿಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರವಾಸೋದ್ಯಮ ವ್ಯಾಪ್ತಿಯ ಹೋಟೆಲ್,  ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡಲಾಗಿದೆ.  ಮುನ್ನೆಚ್ಚರಿಕಾ ಕ್ರಮದಿಂದ ಹೋಟೆಲ್ ತೆರೆಯಿರಿ. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಹೋಟೆಲ್ ತೆರೆಯಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೋಟೆಲ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

 

Key words: open -hotel –restaurant-  CM BS Yeddyurappa – released – tourism.