Saturday, August 8, 2026

BDA Apartments

Home Front Page ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ ತೆರೆಯಲು ಚಿಂತನೆ- ಶಿಕ್ಷಣ ಸಚಿವ ಬಿಸಿ ನಾಗೇಶ್.

ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ ತೆರೆಯಲು ಚಿಂತನೆ- ಶಿಕ್ಷಣ ಸಚಿವ ಬಿಸಿ ನಾಗೇಶ್.

ಬೆಂಗಳೂರು,ಜನವರಿ,27,2022(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದ್ದು ಇದೀಗ ಸೋಂಕು ಕೊಂಚ ತಗ್ಗಿದ್ದು ಶಾಲೆಗಳನ್ನ ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ ತೆರಯಲು ಚಿಂತನೆ ನಡೆಸಿದ್ದೇವೆ.  1ರಿಂದ 9ನೇ ತರಗತಿ ತೆರಯಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಲಾಗುತ್ತದೆ.  ನಾಳಿನ ಸಭೆಯಲ್ಲಿ ಚರ್ಚಿಸಿ ಶಾಲೆ ಆರಂಭದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ  ಬೇರೆ ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಿರುವ ಕಡೆಗಳಲ್ಲಿ ಮಾತ್ರ ಶಾಲೆ ಬಂದ್ ಮಾಡಲಾಗುತ್ತಿದೆ.

Key words: open-school -Bangalore – Minister -BC Nagesh.