ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಉದ್ಘಾಟನೆ: ಮೇಕ್‌ ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಸಚಿವ ಎಂಟಿಬಿ ನಾಗರಾಜ್.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 25,2021(www.justkannada.in):  ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಅನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ‌ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ  ಎನ್.ನಾಗರಾಜು(ಎಂ.ಟಿ.ಬಿ.) ಅವರು ಇಂದು ಉದ್ಘಾಟಿಸಿದರು.jk

ದೊಡ್ಡಬಳ್ಳಾಪುರ ಶಾಸಕರಾದ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ,  ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ದೊಡ್ಡಬಳ್ಳಾಪುರದ ಮೇಕ್‌ ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲನೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ  ಎನ್.ನಾಗರಾಜು(ಎಂ.ಟಿ.ಬಿ.) ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣ‌ ಹಂತದಲ್ಲಿರುವ ಮೇಕ್‌ಶಿಫ್ಟ್ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ದೊಡ್ಡಬಳ್ಳಾಪುರ ಶಾಸಕರಾದ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ,  ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: Opening – Black Fungus- Operation- Theater-minister-MTB Nagaraj