ಉಗ್ರರ ವಿರುದ್ಧ ಕಾರ್ಯಾಚರಣೆ: ಮೈಸೂರು ಮೂಲದ ಯೋಧ ಹುತಾತ್ಮ.

ಮೈಸೂರು,ನವೆಂಬರ್,23,2023(www.justkannada.in):  ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ಗುಂಡಿನ ಚಕಮಕಿ ವೇಳೆ ಮೈಸೂರು ಮೂಲದ ಯೋಧ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ.

ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ. ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ ಯೋಧ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು.

ಕ್ಯಾಪ್ಟನ್ ಪ್ರಾಂಜಲ್  63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು.  ಈ ನಡುವೆ ಉಗ್ರರ ಅಡಗುತಾಣಕ್ಕೆ ದಾಳಿ ನಡೆಸಿದ್ದಾಗ ಪ್ರತಿದಾಳಿಗೆ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ.

Key words: Operation –against- terrorists-Mysore- soldier- martyred.