ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮೂವರು ಡ್ರಗ್ಸ್ ಪೆಡ್ಲರ್ ಗಳ ಬಂಧನ.

ಬೆಂಗಳೂರು, ಅಕ್ಟೋಬರ್,20,2022(www.justkannada.in): ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.

ಮೊಹ್ಮದ್ , ಸೈಯದ್ ಫಹಾದ್ ಮತ್ತು  ಸೈಯದ್ ಬಂಧಿತ ಆರೋಪಿಗಳು.   ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಆಮದು ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.  ಬಂಧಿತರಿಂದ 4.5 ಲಕ್ಷ ಮೌಲ್ಯದ ಡ್ರಗ್ಸ್ ಹಾಗೂ 3 ಮೊಬೈಲ್ ಜಪ್ತಿ ಮಾಡಲಾಗಿದೆ.

ಕಾಲೇಜು ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎನ್ನಲಾಗಿದೆ.  ಬಂಧಿತರ ಸಂಪರ್ಕದಲ್ಲಿದ್ಧ ಮತ್ತಿಬ್ಬರು ನಾಪತ್ತೆಯಾಗಿದ್ದು,  ನಾಪತ್ತೆಯಾದ ಪೆಡ್ಲರ್ ಗಾಗಿ ಹುಡುಕಾಟ ಮುಂದುವರೆದಿದೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Operation – CCB –Police-Arrest – three -drug peddlers.