ಬಿಜೆಪಿಯಿಂದ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲ: ಇದು ಪ್ರಜಾಪ್ರಭುತ್ವಕ್ಕೆ ಮಾರಕ- ಮಾಜಿ ಸಿಎಂ ಸಿದ‍್ಧರಾಮಯ್ಯ ಗಂಭೀರ ಆರೋಪ.

ಮೈಸೂರು,ಜೂನ್,23,2022(www.justkannada.in): ಮಹರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸರ್ಕಾರ ಪತನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದು, ಬಿಜೆಪಿ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಗುಡುಗಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ ಹಬ್ಬಿಸಿದ್ದಾರೆ. ಇದನ್ನು ತಡೆಗಟ್ಟಲು ಪಕ್ಷಾಂತರ ಕಾಯ್ದೆ ತಿದ್ದುಪಡಿ ಆಗಬೇಕು. ಒಂದು ಪಕ್ಷದಿಂದ. ಆಯ್ಕೆಯಾದವನು ಬೇರೆ ಸ್ಥಾನಕ್ಕೆ ಹೋಗದಂತೆ ತಡೆಯಬೇಕು. ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ. ಆಪರೇಷನ್ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು. 2008ರಲ್ಲಿ ಯಡಿಯೂರಪ್ಪ ಮೊದಲ ಆಪರೇಷನ್ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಎಲ್ಲಾ ಕಡೆ ಹಣ ಕೊಟ್ಟಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ ವಿಚಾರ: ಇದು ಸಾಮಾಜಿಕ ನ್ಯಾಯ ಅಲ್ಲ, ವಿಶೇಷವೂ ಅಲ್ಲ.

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ‍್ಧರಾಮಯ್ಯ, ಇದು ಸಾಮಾಜಿಕ ನ್ಯಾಯ ಅಲ್ಲ ವಿಶೇಷವೂ ಅಲ್ಲ. ಆ ರೀತಿ ಇದ್ದರೆ ಆರ್ ಎಸ್ ಎಸ್ ಮುಖ್ಯ ಸರಸಂಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ಭಾಗವತ್ ಸ್ಥಾನಕ್ಕೆ ಇಂತಹ ಮಹಿಳೆಯನ್ನು ತರಲಿ. ದ್ರೌಪದಿ ಮುರ್ಮಾ ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲರು ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಅಂತಹ ಕೆಲಸ ಮಾಡಲು ಇವರು ಬಿಡಲ್ಲ. ಹಿಂದೆ ರಾಜೇಂದ್ರ ಪ್ರಸಾದ್ ಅವರು ಮಾಡಿದಂತೆ ಕೆಲಸ ಮಾಡಲು ಆಗಿತ್ತಾ. ರಾಮನಾಥ್ ಕೋವಿಂದ್ ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು.? ಇದು ಅವರಂತೆ ನಾಮಕವಾಸ್ತೆಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ.?

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಡಬಲ್ ಇಂಜಿನ್ ಸರ್ಕಾರದ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ.? ಅದು ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡಿ. ಸುಮ್ಮನೇ ಸುಳ್ಳು ಹೇಳಿ ಮೋದಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯ ಸರ್ಕಾರ ಮೋದಿಗೆ ರಾಜ್ಯದ ಬೇಡಿಕೆ ಬಗ್ಗೆ ಮನವಿ ನೀಡದ ವಿಚಾರ. ಮೋದಿ ಏನು ಮಾಡುವುದಿಲ್ಲ ಅನ್ನೋದು ರಾಜ್ಯ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಯಾವುದೇ ಮನವಿ ನೀಡಿಲ್ಲ. ಮೋದಿ ಕಾರ್ಯಕ್ರಮಕ್ಕೆ 25 ಕೋಟಿಗಿಂತ ಹೆಚ್ಚು ಖರ್ಚು ಮಾಡಲಾಗಿದೆ. ರಸ್ತೆ ಆಗಿದಷ್ಟೇ ಜನರಿಗೆ ಆದ ಲಾಭ ಎಂದು ಸಿದ‍್ಧರಾಮಯ್ಯ ಟೀಕಿಸಿದರು.

Key words: Operation kamala-corruption-money – BJP-Former CM-Siddhiramaiah

ENGLISH SUMMARY..

BJP’s operation lotus using corruption money is dangerous for democracy: Former CM Siddaramaiah

Mysuru, June 23, 2022 (www.justkannada.in): Following the political developments taking place in Maharashtra leading to fall of Maharasthra State Govt., former Chief Minister Siddaramaiah today made serious charges against the BJP by saying that the BJP is doing ‘Operation Lotus’ using corruption money and mentioned it as dangerous for democracy.
Speaking in Mysuru today, the leader of the opposition said that the BJP has spread its addition to the entire nation. “Migration to parties should be prevented in order to stop such developments. A person who is elected from one party should be prevented from migrating to another party. In case if any person jumps to other parties they should not be allowed to contest in the election for 10 years. It is essential for the survival of democracy. It is the BJP that gave birth to Operation Lotus. B.S. Yediyurappa led the operation lotus for the first time in 2008. He didn’t get majority any time. Hence, he purchased MLAs everytime,” he alleged.

In his response to the BJP’s selection of the candidate for the Presidential post, Siddaramaiah said it is not either social justice or there is anything special about it. “If they are so serious let them replace Mohan Bhagwat with such a person. Draupadi Murmu is a BJP person. She has served in several posts including governor. However, the BJP won’t allow her to work as she wishes if she becomes the president. Can she work like Rajendra Prasad earlier? Ram Nath Kovind was also a President. But what did he do? This is also similar, they have selected this candidate just for name sake,” he alleged.

Keywords: Former CM Siddaramaiah/ BJP Operation Lotus/ using corruption money/ dangerous/ democracy