Wednesday, August 26, 2026

BDA Apartments

Home Front Page ಅವಕಾಶ ಕೊಟ್ರೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ- ಸಿ.ಪಿ ಯೋಗೇಶ್ವರ್

ಅವಕಾಶ ಕೊಟ್ರೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ- ಸಿ.ಪಿ ಯೋಗೇಶ್ವರ್

ಬೆಂಗಳೂರು,ಅಕ್ಟೋಬರ್,21,2024 (www.justkannada.in):  ಚನ್ನಪಟ್ಟಣ ಉಪಚುನಾವಣೆಯಲ್ಲಿ ಅವಕಾಶ ಕೊಟ್ಟರೇ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ.  ಅವಕಾಶ ಸಿಗಬೇಕಷ್ಟೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿ.ಪಿ ಯೋಗೇಶ್ವರ್, ಟಿಕೆಟ್ ಸಂಬಂಧ ನಾನು ಹೆಚ್. ಡಿ ಕುಮಾರಸ್ವಾಮಿ  3ದಿನಗಳಿಂದ ಚರ್ಚಿಸುತ್ತಿದ್ದೇವೆ. ನಾನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡಿದರೆ ಕಷ್ಟ ಆಗುತ್ತೆ . ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂಬ ಆಸೆ ಇದೆ. ಆದರೆ ಕುಮಾರಸ್ವಾಮಿಗೆ ಮಗನಿಗೆ ಟಿಕೆಟ್ ಕೊಡಬೇಕೆಂಬ ಮನಸ್ಸು ಇದ್ರೆ ಏನ್ ಮಾಡೋಕೆ ಆಗುತ್ತೆ ಎಂದರು.

ಜನರು ಸಹ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡುವುದು ಬೇಡ ಎನ್ನುತ್ತಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಆದರೆ ನನಗೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂದು ಸಿಪಿ ಯೋಗೇಶ್ವರ್ ತಿಳಿಸಿದರು.

Key words: Opportunity, NDA, candidate, CP Yogeshwar