ನಾಳೆಯಿಂದ ನಂದಿ ಬೆಟ್ಟ ಪ್ರವೇಶಕ್ಕೆ ಜಿಲ್ಲಾಡಳಿತದಿಂದ ಷರತ್ತಿನ ಅವಕಾಶ

ಬೆಂಗಳೂರು, ನವೆಂಬರ್ 30, 2021 (www.justkannada.in): ಪ್ರಸಿದ್ಧ ನಂದಿಗಿರಿಧಾಮ (ನಂದಿ ಬೆಟ್ಟ) ಪ್ರವೇಶಕ್ಕೆ ಡಿ.1ರಿಂದ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

ಶನಿವಾರ ಮತ್ತು ಭಾನುವಾರ ಗಿರಿಧಾಮದಲ್ಲಿ ಕೊಠಡಿಗಳನ್ನು ಕಾಯ್ದಿರಿಸಿದ ಪ್ರವಾಸಿಗರ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಆದರೆ ಸಾಮಾನ್ಯ ಪ್ರವಾಸಿಗರಿಗೆ ಪ್ರವೇಶವಿಲ್ಲ.

ಆ.24ರ ರಾತ್ರಿ ಸುರಿದ ಭಾರಿ ಮಳೆಗೆ ಗಿರಿಧಾಮದಲ್ಲಿ ಭೂ ಕುಸಿತ ಉಂಟಾಗಿತ್ತು. ಅಂದಿನಿಂದ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಗಿರಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕರ್ನಾಟಕ ಪ್ರವಾಸೋದ್ಯಮ ನಿಗಮದ ಬಹುಪಾಲು ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಬೇರೆಡೆ ನಿಯೋಜಿಸಲಾಗಿತ್ತು.