Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಡಿಸೆಂಬರ್,08,2020(www.justkannada.in) : ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆಗಳನ್ನು ವಿರೋಧಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿ ಭಾರತ್ ಬಂದ್ ಗೆ ಬೆಂಬಲ ಸೂಚಿಸಲಾಯಿತು.

logo-justkannada-mysore

ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಜಮಾವಣೆಗೊಂಡ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಜಮೀರ್ ಅಹ್ಮದ್ ಇತರರು ಭಾಗವಹಿಸಿದ್ದರು.

Opposite,Gandhi,Statue,Vidyasagar,Congress,protests,displaying,black,flag

key words : Opposite-Gandhi-Statue-Vidyasagar-Congress-protests-displaying-black-flag