Saturday, August 1, 2026

BDA Apartments

Home Front Page ವಿಪಕ್ಷಗಳ ಆರೋಪ ಸುಳ್ಳು: ಗ್ಯಾರಂಟಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ-ಸಿಎಂ ಸಿದ್ದರಾಮಯ್ಯ

ವಿಪಕ್ಷಗಳ ಆರೋಪ ಸುಳ್ಳು: ಗ್ಯಾರಂಟಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ-ಸಿಎಂ ಸಿದ್ದರಾಮಯ್ಯ

ಬೆಳಗಾವಿ ಡಿಸೆಂಬರ್,12,2024 (www.justkannada.in):  ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದರಿ ಯೋಜನೆಗಳಿಗೆ ಆಯವ್ಯಯದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ.

ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6%  ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.

ರಾಜ್ಯ ಸರ್ಕಾರವು ರಾಜಸ್ವ ಹಾಗೂ ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು ಈ ಆರೋಪದಲ್ಲಿ   ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ  ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ

ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ  ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದರು.

ವಿರೋಧಪಕ್ಷಗಳ ಆರೋಪ ಸತ್ಯಕ್ಕೆ ದೂರ

ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ  ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25 ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ. ರಾಜ್ಯ ಸರ್ಕಾರ 1ಲಕ್ಷದ 4 ಸಾವಿರ ಕೋಟಿ ರೂಗಳ ಸಾಲವನ್ನು ಮಾಡಲಾಗಿದ್ದು,ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ.‌ ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಎಸ್ ಸಿ ಪಿ/ಟಿಎಸ್ ಪಿ ಅನುದಾನ:

ಎಸ್ ಸಿ ಪಿ/ಟಿಎಸ್ ಪಿಗಳಿಗೆ ಬಳಸಲಾಗಿರುವ ಹಣ 2017-18ನೇ ಸಾಲಿನಲ್ಲಿ 36 ಸಾವಿರ ಕೋಟಿ ರೂ.ಖರ್ಚು ಮಾಡಲಾಗಿದೆ. ಈ ವರ್ಷ 39, 272 ಕೋಟಿ ರೂ.ಗಳ ಅನುದಾನ ಇಡಲಾಗಿದೆ.  ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್ ಸಿ ಪಿ/ಟಿ ಎಸ್ ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆ ಏಕೆ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ ಸಿಎಂ, ಕೇಂದ್ರ ಸರ್ಕಾರ ಏಕೆ ಈ ಕಾಯ್ದೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಪ್ರಶ್ನಿಸಿದರು.‌

Key words: Opposition, allegations, development works, CM Siddaramaiah