ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ವಿರೋಧ: ಅಸಮಾಧಾನ ಹೊರ ಹಾಕಿದ ಶಾಸಕ ಎಸ್.ಟಿ ಸೋಮಶೇಖರ್.

ಬೆಂಗಳೂರು,ಅಕ್ಟೋಬರ್,5,2023(www.justkannada.in):  ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಬಿಜೆಪಿಯಲ್ಲಿ ಅಪಸ್ವರ ಕೇಳಿ ಬಂದಿದ್ದು, ಶಾಸಕ ಎಸ್.ಟಿ ಸೋಮಶೇಖರ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಎಸ್.ಟಿ ಸೋಮಶೇಖರ್, ಬಿಜೆಪಿ- ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ.   ಬಿಜೆಪಿ ಪಕ್ಷದಲ್ಲಿ ಯಾರೊಂದಿಗೂ ಚರ್ಚಿಸಿಲ್ಲ.  ಮೈತ್ರಿಯಾಗುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ  ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿಯಾದ  ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

Key words: opposition – BJP-JDS- alliance-MLA- ST Somashekhar