ಹಿಂದೂ ಆಗಿ ಹುಟ್ಟುವುದೇ ತಪ್ಪಾ..? ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ವಿರುದ್ದ ಸಚಿವ ಆರ್.ಅಶೋಕ್  ಕಿಡಿ…

ಬೆಂಗಳೂರು,ಮಾ,28,2020(www.justkannada.in): ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ದ ಕಂದಾಯ ಸಚಿವ ಆರ್. ಅಶೋಕ್ ಗುಡುಗಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡೋಕೆ ನಮ್ಮ ಪೂರ್ಣ ಬೆಂಬಲವಿದೆ. ಹಿಂದೂ ಪ್ರತಿಪಾದಕರೆಂಬ ಕಾರಣಕ್ಕೆ ವಿರೋಧ ಸರಿಯಲ್ಲ. ಹಿಂದೂ ಆಗಿ ಹುಟ್ಟುವುದೇ ತಪ್ಪಾ(?) ಅವರನ್ನು ವಿರೋಧ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಸಾವರ್ಕರ್ ಹೆಸರು ಇಟ್ಟೇ ಇಡುತ್ತೇವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು ಮಾತನಾಡಿದ ಸಚಿವ ಅರ್.ಅಶೋಕ್, ಎಲ್ಲಾ ಯೋಜನೆಗಳಿಗೆ ನೆಹರು, ಗಾಂಧಿ ಹೆಸರು ಇಟ್ಟಿದ್ದಾರೆ. ಬೇರೆಯವರ ಹೆಸರು ಇಟ್ಟರೆ ಕಾಂಗ್ರೆಸ್​​ ನಾಯಕರಿಗೆ ಆಗಲ್ಲ. ಇನ್ನು ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರು. ಅಂತಹ ಹೋರಾಟಗಾರನ ಬಗ್ಗೆ ವಿರೋಧ ಸರಿಯಲ್ಲ. ಹಿಂದೆಲ್ಲಾ ಏಕೆ ಕೆಂಪೇಗೌಡರ ಹೆಸರು ಇಡಲಿಲ್ಲ. ಸಂಗೊಳ್ಳಿ ರಾಯಣ್ಣ ಹೆಸರು ಏಕೆ ಇಡಲಿಲ್ಲ ಎಂದು ಕಾಂಗ್ರೆಸ್ ವಿರುದ್ದ ಟೀಕಿಸಿದರು.

Key words:   Opposition- Congress-minister– R Ashok – fly over- Savarkar