Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧ: ಮಂಗಳೂರು ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ.  

ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧ: ಮಂಗಳೂರು ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ.  

ಮಂಗಳೂರು, ಸೆಪ್ಟಂಬರ್,9,2023(www.justkannada.in):   ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ  ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ  ವಿರೋಧ ವ್ಯಕ್ತಪಡಿಸಿ ಎಬಿವಿಪಿ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜಿನಲ್ಲಿ  ದೆಹಲಿ  ವಿವಿ ನಿವೃತ್ತ ಪ್ರಾಧ್ಯಾಪಕ  ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ಹಮ್ಮಿಕೊಳ್ಳಲಾಗಿದ್ದು, ಬಿವಿ ಕಕ್ಕಿಲಾಯ  ಪ್ರತಿಷ್ಟಾನದಿಂದ ಆಯೋಜಿಸಲಾಗಿದೆ.  ಆದರೆ ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರೋಧ ವ್ಯಕ್ತಪಡಿಸಿದ್ದು,  ಶಂಸುಲ್ ಇಸ್ಲಾಂ ಗೋಬ್ಯಾಕ್ ಘೋಷಣೆ ಕೂಗಿ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧ: ಮಂಗಳೂರು ವಿವಿಯಲ್ಲಿ ಎಬಿವಿಪಿ ಪ್ರತಿಭಟ...

ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು,  ಎಬಿವಿಪಿ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದರು.

Key words: Opposition – Dr. Shamsul Islam- lecture-ABVP- protest – Mangalore University.