ತುಮಕೂರು,ಮೇ,31,2025 (www.justkannada.in): ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ತುಮಕೂರಿನಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು ನೂರಾರು ರೈತರು ಪಾಲ್ಗೊಂಡು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.
ತುಮಕೂರು ಗುಬ್ಬಿ ತಾಲ್ಲೂಕಿನ ಮಲ್ಲಸಂದ್ರದ ಕಳ್ಳಿ ಪಾಳ್ಯ ರಸ್ತೆ ಬಳಿ ಬಿಜೆಪಿ ಶಾಸಕ ಸುರೇಶ್ ಗೌಡ ಮಠಾಧೀಶರು ಸೇರಿ ಬಿಜೆಪಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಗಿದ್ದು, ಹೊಸಕೆರೆ ಬಳಿ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಬ್ಬಿ ತಾಲ್ಲೂಕಿನ ಸಂಕಾಪುರದಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಡೆಯುವ ಸ್ಥಳಕ್ಕೆ ಪ್ರತಿಭಟನಾಕಾರರು ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ರೈತರು ಬೇರೆ ಜಿಲ್ಲೆಗೆ ನೀರು ಹರಿಸಲು ಬಿಡಲ್ಲ ಎಂದು ಕಿಡಿಕಾರಿದ್ದಾರೆ.
Key words: Opposition, Hemavati Link Canal, Massive, protest